Feedback

ವಿಶ್ವ ಪರಿಸರ ದಿನ ಆಚರಣೆ

ಇಲ್ಲಿನ ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು. ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.